ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಸ್ಕಿಲ್ ಟ್ರೈನರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಿತ ತಾಂತ್ರಿಕ ವಿಭಾಗದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೊಸದಾಗಿ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳಿಗೂ ಅವಕಾಶವಿದ್ದು, ತಂತ್ರಜ್ಞಾನ ಹಾಗೂ ಬೋಧನಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ತಾಂತ್ರಿಕ ವಿಷಯಗಳು ಮತ್ತು ತರಬೇತುದಾರರಾಗಿ ಕಾರ್ಯನಿರ್ವಹಿಸುವ ಕುರಿತು ಸಂಪೂರ್ಣ ತರಬೇತಿ ನೀಡಲಾಗುತ್ತದೆ. ಆಧುನಿಕ ತಂತ್ರಜ್ಞಾನಗಳ ಬಗ್ಗೆ ಪ್ರಾಯೋಗಿಕ ಅನುಭವ ಪಡೆಯುವುದರೊಂದಿಗೆ ವೃತ್ತಿಪರ ಕೌಶಲ್ಯ ಮತ್ತು ವೃತ್ತಿಜೀವನದ ಬೆಳವಣಿಗೆಗೆ ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೆ, ವಿವಿಧ ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶವೂ ಇರಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ (CV) ಹಾಗೂ ಪೋರ್ಟ್ಫೋಲಿಯೊವನ್ನು [email protected] ಇಮೇಲ್ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 8123165069 ಸಂಪರ್ಕಿಸಬಹುದು. ಸಂಸ್ಥೆಯ ವೆಬ್ಸೈಟ್ www.msdcskills.org.















