ಜಿ.ಪಂ/ತಾಲೂಕು ನಿರ್ವಹಣಾ ಘಟಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಅಭಿಯಾನ ನಿರ್ವಾಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ zpudupi.karnataka.gov.in ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಮೊ.ನಂ: 9480878002 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.