ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಂದಿನಿಂದ ಅಂದರೆ ಏಪ್ರಿಲ್ 1ರಿಂದ ಇಳಿಕೆಯಾಗಲಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದೆ. ಇಂದಿನಿಂದಲೇ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈಗ 91.50 ರೂಪಾಯಿ ಇಳಿಕೆಯಾಗಲಿದೆ.
ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 2024 ರ ಆರ್ಥಿಕ ವರ್ಷದ ಮೊದಲ ದಿನದಂದು ಕಡಿತಗೊಳಿಸಲಾಗಿದೆ. ಈ ಬದಲಾವಣೆಯನ್ನು ವಾಣಿಜ್ಯ ಅನಿಲ ಸಿಲಿಂಡರ್‌ಗಳ ವೆಚ್ಚದಲ್ಲಿ ಮಾತ್ರ ಮಾಡಲಾಗಿದೆ. ಮನೆಗಳಲ್ಲಿ ಬಳಸುವ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ..












