ಸಿಎಂ ಭೇಟಿಗೆ ಬಂದ ಖ್ಯಾತ ನಟಿ ಪ್ರೇಮಾ, ಒಳಗೆ ಹೋಗದಂತೆ ತಡೆದ ಭದ್ರತಾ ಸಿಬ್ಬಂದಿ, ನಿರಾಶೆಯಿಂದ ವಾಪಾಸ್ ತೆರಳಿದ ನಟಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ಬಂದಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಪ್ರೇಮಾ ಅವರನ್ನು ಭದ್ರತಾ ಸಿಬ್ಬಂದಿ ಒಳಪ್ರವೇಶಕ್ಕೆ ಅವಕಾಶ ನೀಡದ ಘಟನೆ ನಡೆದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಉದ್ದೇಶದಿಂದ ಪ್ರೇಮಾ ಅವರ ನಿವಾಸಕ್ಕೆ ಆಗಮಿಸಿದ್ದರು. ಆದರೆ ಭದ್ರತಾ ಸಿಬ್ಬಂದಿ, ಮುಖ್ಯಮಂತ್ರಿ ಅವರನ್ನು ಭೇಟಿಯಾಗಬೇಕಾದರೆ ಅಧಿಕೃತವಾಗಿ ‘ಕೃಷ್ಣಾ’ ಕಚೇರಿಗೆ ತೆರಳುವಂತೆ ಸೂಚನೆ ನೀಡಿದ್ದು, ನಿವಾಸದೊಳಗೆ ಪ್ರವೇಶಿಸಲು ಅವಕಾಶ ನೀಡಿಲ್ಲ ಎನ್ನಲಾಗಿದೆ.

ಈ ಘಟನೆ ಕುರಿತು ನಟಿ ಪ್ರೇಮಾ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೆ, ಅವರು ಯಾವ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಬಂದಿದ್ದರು ಎಂಬುದು ಕೂಡ ಇನ್ನೂ ಬಹಿರಂಗವಾಗಿಲ್ಲ.

ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ವಿವಿಧ ರೀತಿಯ ಚರ್ಚೆಗೆ ಕಾರಣವಾಗಿದೆ.