ರೇಣುಕಾಸ್ವಾಮಿ ಹತ್ಯೆ ಕೇಸ್‌ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು

ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್ (Court), ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದ.

ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜೊತೆ ಕಾನ್ಫರೇನ್ಸ್ ಕರೆ ಮಾಡಿ ಸಾಕ್ಷಿಗೆ ಬೆದರಿಕೆ ಹಾಕಿದ್ದು ಗೊತ್ತಾಗಿತ್ತು. ಬಳಿಕ ಗೌರವ್‌ ಶೆಟ್ಟಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ.

ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ಗೌರವ್ ಶೆಟ್ಟಿ, ಕಾಮಾಕ್ಷಿ ಪಾಳ್ಯ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.