ಕಟಪಾಡಿ: ಎಸ್.ವಿ.ಎಸ್ ಹಾಗೂ ತ್ರಿಶಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕಟಪಾಡಿ : ಜನವರಿ 26 ರಾಷ್ಟ್ರದೆಲ್ಲೆಡೆ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು ಆ ನಿಟ್ಟಿನಲ್ಲಿ ಕಟಪಾಡಿಯ ಎಸ್.ವಿ.ಎಸ್ ಸಂಸ್ಥೆಗಳು ಹಾಗೂ ತ್ರಿಶಾ ಸಂಸ್ಥೆಯಿಂದ ಗಣರಾಜ್ಯೋತ್ಸವದ ಆಚರಣೆ ಎಸ್.ವಿ.ಎಸ್ ಶಾಲೆಯ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈ. ಲಿ. ಇದರ ವ್ಯವಸ್ಥಾಪಕ ಶ್ರೀಧರ್ ರಾವ್ ಮಾತನಾಡಿ ಭಾರತದ ವಿವಿಧತೆಯಲ್ಲಿ ಏಕತೆಯನ್ನು ನಾವೆಲ್ಲರೂ ಅನುಭವಿಸಬೇಕು ಜೊತೆಗೆ ನಾವೆಲ್ಲರೂ ಒಂದೇ ಎನ್ನುವ ಸಂವಿಧಾನದ ಅಡಿಯಲ್ಲಿ ಬದುಕಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಸಂಚಾಲಕ ಸತ್ಯೇಂದ್ರ ಪೈ ,ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿ.ಎ ಗೋಪಾಲಕೃಷ್ಣ ಭಟ್, ತ್ರಿಶಾ ವಿದ್ಯಾ ಕಾಲೇಜು, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಎಸ್.ವಿ.ಎಸ್ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜು, ತ್ರಿಶಾ ವಿದ್ಯಾ ಪಿ.ಯು ಕಾಲೇಜು, ಎಸ್.ವಿ.ಎಸ್ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಆಲ್ಡ್ರಿನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.