ಉಡುಪಿ: ಸಂಭ್ರಮದ ಗಣರಾಜ್ಯೋತ್ಸವ ದಿನಾಚರಣೆ; ಸಾಧಕರಿಗೆ ಸನ್ಮಾನ

ಉಡುಪಿ: ಜಿಲ್ಲಾಡಳಿತದ ವತಿಯಿಂದ ಜ.26ರಂದು ಇಲ್ಲಿನ ಮಹಾತ್ಮಗಾಂಧಿ ಜಿಲ್ಲಾ ಮೈದಾನ ಅಜ್ಜರಕಾಡಿನಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ನಂತರ ಜಿಲ್ಲಾ ಪೊಲೀಸ್ ಪಡೆ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೌರವ ರಕ್ಷೆ ಸ್ವೀಕರಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಜಿಲ್ಲೆಯಲ್ಲಿ ಸರಕಾರ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು. ರಾಜ್ಯ ಸರಕಾರದಿಂದ ಜನಸ್ನೇಹಿ ಆಡಳಿತ ಸರ್ವತೋಮುಖ ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೆರವು ನೀಡಿದೆ ಎಂದರು.

ಇದೇ ಸಂದರ್ಭದಲ್ಲಿ ಪ್ರಗತಿಪರ ರೈತರು ಹಾಗೂ ವಿದ್ಯಾರ್ಥಿ ಸಾಧಕರನ್ನು ಸನ್ಮಾನಿಸಲಾಯಿತು.

ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಶಾಸಕ ಯಶಪಾಲ್ ಸುವರ್ಣ ಉಡುಪಿ, ಡಿಸಿ ಡಾ.ವಿದ್ಯಾ ಕುಮಾರಿ ಎಸ್.ಪಿ ಡಾ.ಅರುಣ್ ಕೆ, ಎಡಿಸಿ ಮಮತಾದೇವಿ, ಜಿ.ಪಂ ಸಿಇಒ ಪ್ರತೀಕ್ ಬಯಲ್, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು