ಬೆಂಗಳೂರು: ಸಂಪೂರ್ಣವಾಗಿ ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವ ಅಗತ್ಯವಿಲ್ಲ. ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಿ, ಅಂತರ್ ರಾಜ್ಯ ಮತ್ತು ಜಿಲ್ಲೆಗಳ ಓಡಾಟಕ್ಕೆ ನಿರ್ಬಂಧ ಹೇರಬೇಕು ಎಂದು ಇಂದು ಸಿಎಂ ಯಡಿಯೂರಪ್ಪನವರ ಜತೆಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಬಹುತೇಕ ಜಿಲ್ಲೆಗಳ ಡಿಸಿಗಳು ಅಭಿಪ್ರಾಯಪಟ್ಟಿದ್ದಾರೆ.
ದಕ್ಷಿಣ ಕನ್ನಡ, ಧಾರವಾಡ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಗೆ ಒಲವು ವ್ಯಕ್ತಪಡಿಸಿದ್ದು, ಒಂದು ವಾರಗಳ ಕಾಲ ತಮ್ಮ ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾರೆ.