ಉಡುಪಿ: ಈ ಬಾರಿಯ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಸಂಶೋಧಕ ಪ್ರೊ. ಅ. ಸುಂದರ ಅವರನ್ನು ಆಯ್ಕೆ ಮಾಡಲಾಗಿದೆ.
ಸೆ.12ರಂದು ಸುಂದರ ಅವರ ಶಿವಮೊಗ್ಗದ ನಿವಾಸದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಷ್ಟ್ರಕವಿ ಗೋವಿಂದ ಪೈ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ತಿಳಿಸಿದ್ದಾರೆ.
ಮಣಿಪಾಲ ಗ್ಲೋಬಲ್ನ ಮುಖ್ಯಸ್ಥ ಟಿ.ವಿ. ಮೋಹನದಾಸ್ ಪೈ ಅವರು ತಾಯಿ ವಿಮಲಾ ಪೈ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿದ್ದು, ಪುರಸ್ಕಾರ ₹ 1 ಲಕ್ಷ ನಗದು ಒಳಗೊಂಡಿದೆ.
ಉಡುಪಿಯ ನೀಲಾವರದ ಪ್ರೊ.ಅ. ಸುಂದರ ಪುರಾತತ್ತ್ವ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಧಾರವಾಡದ ಕರ್ನಾಟಕ ವಿವಿಯಲ್ಲಿ ಪ್ರಾಚೀನ ಭಾರತೀಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರು, ಮುಖ್ಯಸ್ಥರೂ ಆಗಿದ್ದರು. ಬಿಜಾಪುರದ ಸ್ನಾತಕೋತ್ತರ ವಿಭಾಗದ ನಿರ್ದೇಶಕರಾಗಿ, ಮೈಸೂರು ವಿ.ವಿ ಝಾಕೀರ್ ಹುಸೇನ್ ಪೀಠದ ಮುಖ್ಯಸ್ಥರಾಗಿ ಪ್ರಸ್ತುತ ಶಿವಮೊಗ್ಗದಲ್ಲಿ ವಾಸವಿದ್ದಾರೆ.