ವಸತಿ ನಿರ್ಮಾಣ ಯೋಜನೆ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ (ವಸತಿ) ನಿರ್ಮಾಣ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.karnataka.gov.in/kmvstdcl ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.