ನಿವೃತ್ತ ಮುಖ್ಯೋಪಾಧ್ಯಾಯ ಹಾಜಿ ಬಾವು ಬ್ಯಾರಿ ಕರಂದಾಡಿ ನಿಧನ

ಕಾಪು: ಕರಂದಾಡಿ ನಿವಾಸಿ ನಿವೃತ್ತ ಮುಖ್ಯೋಪಾಧ್ಯಾಯ ಹಾಜಿ ಬಾವು ಬ್ಯಾರಿ ಕರಂದಾಡಿ ಇವರು ಫೆ. 25 ರಂದು ಅಲ್ಪಕಾಲದ ಅಸೌಖ್ಯದಿಂದ ತನ್ನ ನಿವಾಸದಲ್ಲಿ ನಿಧನರಾದರು. ಮಲ್ಲಾರು ಕರಂದಾಡಿ, ಪುಂಜಾಲಕಟ್ಟೆ, ಪಡುಬಿದ್ರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಮುಖ್ಯೋಪಾದ್ಯಾಯರಾಗಿ 35 ವರ್ಷ ಸೇವೆ ಸಲ್ಲಿಸಿದ್ದ ಇವರು ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಆಡಳಿತ ಸಮಿತಿಯ ಅಧ್ಯಕ್ಷರಾಗಿಯೂಕಾರ್ಯನಿರ್ವಹಿಸಿದ್ದರು.

ಇವರು ಪತ್ನಿ ಹಾಗೂ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಾಗಿದ್ದು ಇದೀಗ ವಿದೇಶದಲ್ಲಿರುವ ಡಾ. ಅಬ್ದುಲ್ ರಝಕ್ ಯು.ಕೆ ಸೇರಿದಂತೆ ನಾಲ್ವರು ಪುತ್ರರು ಎರಡು ಪುತ್ರಿಯರನ್ನು ಅಗಲಿದ್ದಾರೆ.

ಮೃತರ ನಿಧನಕ್ಕೆ ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಬಳಕೆದಾರರ ವೇದಿಕೆ ದೇವಿನಗರ ಪರ್ಕಳ ಅಜೀವ ಗೌರವಾಧ್ಯಕ್ಷ ಹಾಜಿ ಕೆ.ಅಬೂಬಕ್ಕರ್ ಪರ್ಕಳ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ಸಂತಾಪ ವ್ಯಕ್ತಪಡಿಸಿದ್ದಾರೆ.