ರಾತ್ರಿ ಕರ್ಫ್ಯೂ ನಿರ್ಧಾರ ವಾಪಸ್: ಸಿಎಂ ಯಡಿಯೂರಪ್ಪ

ಬೆಂಗಳೂರು: ರೂಪಾಂತರ ಕೊರೊನಾ ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇಂದಿನಿಂದ ಜ. 2ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ದಿಢೀರ್ ಆಗಿ ವಾಪಸು ಪಡೆದಿದೆ.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ವಿರೋಧಗಳು ವ್ಯಕ್ತವಾಗಿದ್ದವು. ಹೀಗಾಗಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾತ್ರಿ ಕರ್ಫ್ಯೂ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.