ಹೈದರಾಬಾದ್: ರಾಜ್ಯಪಾಲೆ ತಮಿಳಸೈ ಸೌಂದರ್ಯರಾಜನ್ ಅವರು ಪ್ರಮಾಣ ವಚನ ಬೋಧಿಸಿದರು. ಇಲ್ಲಿನ ಎಲ್ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು.ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಎಲ್ ಬಿ ನಗರ ಸ್ಟೇಡಿಯಂನಲ್ಲಿ ಪ್ರಮಾಣವಚನ ಸಮಾರಂಭ ನಡೆಯುತ್ತಿದ್ದು, ಸಾವಿರಾರು ಜನರು ಭಾಗಿಯಾಗಿದ್ದಾರೆ.ರೇವಂತ್ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಜೊತೆಗೆ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಹಾಜರಿದ್ದರು.