ಜು. 13 ರಂದು ಕಂದಾಯ ಸಚಿವ ಆರ್ ಅಶೋಕ್ ಜಿಲ್ಲಾ ಪ್ರವಾಸ

ಉಡುಪಿ: ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರು ಜುಲೈ 13 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜು. 12 ರಂದು ರಾತ್ರಿ 8.30 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜು. 13 ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿ, ಉತ್ತರ ಕ್ನನಡ ಜಿಲ್ಲೆಗೆ ಪ್ರಯಾಣಿಸಿ, ನಂತರ ಉಡುಪಿ ಜಿಲ್ಲೆಯಲ್ಲಿ ಸಂಜೆ 6 ಗಂಟೆಗೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ. ನಂತರ ಮಂಗಳೂರಿಗೆ ತೆರಳಲಿರುವರು.