ಬೆಂಗಳೂರು: ದೀಪಾವಳಿ ಹಬ್ಬ ಆಚರಣೆ ಕುರಿತಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಅದರಂತೆ ನವೆಂಬರ್ 7ರಿಂದ 16 ರ ವರೆಗೆ ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ.
* ಸುಪ್ರೀಂ ಕೋರ್ಟ್ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರುವಂತಿಲ್ಲ ಹಾಗೂ ಸುಡುವಂತಿಲ್ಲ.
*ಪರವಾನಗಿ ಪಡೆಯುವ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು.
*ಹಸಿರು ಮಾರಾಟ ಮಳಿಗೆಗಳನ್ನು ನವೆಂಬರ್ 7ರಿಂದ 16ರ ವರೆಗೆ ಮಾತ್ರ ತೆರೆಯಬೇಕು.
*ಸಾರ್ವಜನಿಕ ಸ್ಥಳಗಳಿಂದ ದೂರವಿರುವ ಬಯಲು ಮೈದಾನ ಅಥವಾ ಬಯಲು ಪ್ರದೇಶದಲ್ಲಿ ಮಳಿಗೆಗಳನ್ನು ಸ್ಥಾಪಿಸಬೇಕು.
*ಹಸಿರು ಪಟಾಕಿ ಮಾರಾಟಗಾರರು ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜತೆಗೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯಬೇಕು.