ಐ.ಎಫ್.ಎಫ್.ಐ ಪ್ರಶಸ್ತಿಯನ್ನು ಶಂಕರ್ ನಾಗ್ ಅವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

54 ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ‘ಸ್ಪೆಷಲ್ ಜ್ಯೂರಿ ಅವಾರ್ಡ್’ ಗೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಭಾಗಿಯಾಗಿದ್ದು, ಪ್ರಶಸ್ತಿಯನ್ನು ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಶಂಕರ್ ನಾಗ್ ಅವರಿಗೆ ಅರ್ಪಿಸಿದ್ದಾರೆ. ಶಂಕರ್ನಾಗ್ ಅವರು ತಮಗೆ ಸ್ಪೂರ್ತಿಯಾಗಿದ್ದು ಒಂದಾನೊಂದು ಕಾಲದಲ್ಲಿ ಚಿತ್ರಕ್ಕೆ 1979 ರಲ್ಲಿ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ಶಂಕರ್ ನಾಗ್ ಅವರಿಗೆ ದೊರೆತಿದ್ದು, ಅವರ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ತನಗೆ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದ್ದು, ಪ್ರಶಸ್ತಿಯನ್ನು ಶಂಕರ್ ನಾಗ್ ಅವರಿಗೆ ಅರ್ಪಿಸುತ್ತಿದ್ದೇನೆ ಎಂದು ರಿಷಬ್ ಹೇಳಿದ್ದಾರೆ.

ಕಾಂತಾರ ಚಿತ್ರ ಮತ್ತು ಕಾಂತಾರಾ-1 ರ ಟೀಸರ್ ನ ಅಭೂತಪೂರ್ವ ಯಶಸ್ಸು ತನ್ನ ಜವಾಬ್ದಾರಿಯನ್ನು ಹೆಚ್ಚಿಸಿದ್ದು, ಇನ್ನೂ ಉತ್ತಮ ಚಿತ್ರವನ್ನು ನೀಡಲು ಶ್ರಮಿಸುತ್ತೇನೆ ಎಂದು ಅವರು ಹೇಳಿದ್ದಾರೆ.