ಸಪತ್ನೀಕ ಸಮೇತರಾಗಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ

ಕುಂದಾಪುರ: ಇಲ್ಲಿನ ಬಹುಪ್ರಸಿದ್ದ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಕಾಂತಾರ ಚಿತ್ರದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಪತ್ನೀಕ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.