ಹುಬ್ಬಳ್ಳಿ: ಮೂರು ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29) ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಸುನೀಲ ಅವರು ಕೆಲಸ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್’ಗೆ ದಾಖಲಾಗಿದ್ದರು.












