ರಸ್ತೆ ಅಪಘಾತ: ಖ್ಯಾತ ಯಕ್ಷಗಾನ ಕಲಾವಿದನಿಗೆ ಗಂಭೀರ ಗಾಯ

ಹೊನ್ನಾವರ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಖ್ಯಾತ ಯಕ್ಷಗಾನ ಕಲಾವಿದ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರ ಹಡಿಬಾಳದ ಸಮೀಪ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ ಸುಬ್ರಹ್ಮಣ್ಯ ಚಿಟ್ಟಾಣಿ ಅವರಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.