ಕಾರ್ಕಳ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಾಗೂ ಬೃಹತ್ ಸಮಾವೇಶವು ಮೇ 1 ಸೋಮವಾರದಂದು ನಡೆಯಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಸ್ವರಾಜ್ಯ ಮೈದಾನದಿಂದ ಪ್ರಾರಂಭಗೊಳ್ಳುವ ಬೃಹತ್ ಜಾಥವು ಬಂಡೀಮಠ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆಯಲ್ಲಿ ರೋಡ್ ಶೋ ಮೂಲಕ ಸಾಗಿ ಬೃಹತ್ ಸಮಾವೇಶದೊಂದಿಗೆ ಸಮಾಪನಗೊಳ್ಳಲಿದೆ.
ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಅಭ್ಯರ್ಥಿ ಮುನಿಯಾಲ್ ಉದಯ್ ಶೆಟ್ಟಿ, ಪ್ರಮುಖ ಭಾಷಣಕಾರ, ವಾಗ್ಮಿ ನಿಕೇತ್ ರಾಜ್ ಮೌರ್ಯ, ಸುಧೀರ್ ಕುಮಾರ್ ಮುರೋಳಿ, ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಪಕ್ಷದ ರಾಜ್ಯ ನಾಯಕರು, ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಕ್ಷೇತ್ರದಾದ್ಯಂತ ಮತದಾರರು ಬದಲಾವಣೆಯನ್ನು ಬಯಸುತ್ತಿದ್ದು ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ್ ಶೆಟ್ಟಿ ಪರವಾಗಿ ಒಲವು ತೋರಿಸುತ್ತಿದ್ದಾರೆ. ಪ್ರತೀ ಬೂತಿನಿಂದ 200 ಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಶಾಸಕರ ಕಮಿಷನ್ ಮತ್ತು ಕಲೆಕ್ಷನ್ ಕಾರ್ಯವೈಖರಿಯಿಂದ ಬೇಸತ್ತವರು, ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೇಲೆ ನಂಬಿ ಇಟ್ಟವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಭಯ ಮತ್ತು ಭ್ರಷ್ಟಾಚಾರ ಮುಕ್ತ ಸೌಹಾರ್ದ ಸಮಾಜಕ್ಕಾಗಿ ಕ್ಷೇತ್ರದ ಮತದಾರ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












