ಉಡುಪಿ: ದೈವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ತಾಲೂಕಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ಮೇ.6ರಂದು ಬೆಳಕಿಗೆ ಬಂದಿದೆ.
ಬ್ರಹ್ಮಗಿರಿಯ ಪೃಥ್ವಿರಾಜ ಬಿ ಶೆಟ್ಟಿ ಎಂಬವರ ಕುಟುಂಬದ ಬಾಳ್ಕಟ್ಟು ಬೀಡು ಮನೆಯ ಆವರಣದಲ್ಲಿರುವ ದೈವದ ಮನೆಯಲ್ಲಿ ಕಳ್ಳತನ ನಡೆದಿದೆ. ಯಾರೋ ಕಳ್ಳರು ದೈವದ ಮನೆಯ ಚಿಲಕ ಮುರಿದು ಒಳ ಪ್ರವೇಶಿಸಿ 51 ಸಾವಿರ ರೂ. ಮೌಲ್ಯದ ದೈವದ ಪಂಚ ಲೋಹದ ಹಾಗೂ ಹಿತ್ತಾಳೆಯ ಸೊತ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












