udupixpress
Home Trending ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾಗೆ ವಿಶ್ರಾಂತಿ, ಕೆ.ಎಲ್. ರಾಹುಲ್ ಗೆ ಉಪನಾಯಕ...

ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾಗೆ ವಿಶ್ರಾಂತಿ, ಕೆ.ಎಲ್. ರಾಹುಲ್ ಗೆ ಉಪನಾಯಕ ಪಟ್ಟ

ಮುಂಬೈ: ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಆಸ್ಟ್ರೇಲಿಯಾ ಪ್ರವಾಸಕ್ಕೆ ಇದೀಗ ಬಿಸಿಸಿಐ ಟೀಂ ಇಂಡಿಯಾ ಪ್ರಕಟಿಸಿದೆ.

ಡಿಸೆಂಬರ್ 3 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಬಳಿಕ ಮೂರು ಟಿ ಟ್ವೆಂಟಿ ಹಾಗೂ ಮೂರು ಏಕದಿನ ಪಂದ್ಯಗಳನ್ನು ಭಾರತ ಆಡಲಿದೆ.

ಇಂಜುರಿ ಸಮಸ್ಯೆಗೆ ಒಳಗಾಗಿರುವ ರೋಹಿತ್ ಶರ್ಮಾಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಗೆ ಉಪನಾಯಕ ಪಟ್ಟ ನೀಡಲಾಗಿದೆ. ರಾಹುಲ್ ಟಿ20 ಜತೆಗೆ ಏಕದಿನ ತಂಡಕ್ಕೂ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದ ಉಪನಾಯಕ ಪಟ್ಟ ಎಂದಿನಂತೆ ಅಜಿಂಕ್ಯ ರಹಾನೆಗೆ ನೀಡಲಾಗಿದೆ. ವೇಗಿ ಇಶಾಂತ್ ಶರ್ಮಾ ಹಾಗೂ ರೋಹಿತ್ ಶರ್ಮಾ ಫಿಟ್ನೆಸ್ ಕುರಿತು ಬಿಸಿಸಿಐ ಪರಿಶೀಲನೆ ಮಾಡುವ ಸಾಧ್ಯತೆ ಇದೆ.

ಟೆಸ್ಟ್ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ಶುಭ್ ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೇಟ್ ಕೀಪರ್), ರಿಶಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್.

ಏಕದಿನ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೆ.ಎಲ್. ರಾಹುಲ್ (ಉಪನಾಯಕ), ಶುಭ್ ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹ್ಮದ್ ಶಮಿ, ನವದೀಪ್ ಸೈನಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್.

ಟಿ ಟ್ವೆಂಟಿ ತಂಡ:
ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೆ.ಎಲ್. ರಾಹುಲ್ (ಉಪನಾಯಕ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ.

error: Content is protected !!