ಮಂಗಳೂರು: ರೌಡಿ ಶೀಟರ್ ನ ಬರ್ಬರ ಹತ್ಯೆ

ಮಂಗಳೂರು: ದುಷ್ಕರ್ಮಿಗಳ ತಂಡವೊಂದು ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬರ್ಕೆ ಠಾಣಾ ವ್ಯಾಪ್ತಿಯ ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ನಲ್ಲಿ ನಡೆದಿದೆ.

ಮೃತನನ್ನು ರೌಡಿ ಶೀಟರ್ ಇಂದ್ರಜಿತ್ ಎಂದು ಗುರುತಿಸಲಾಗಿದೆ. ಈತನನ್ನು‌ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ಗಾರ್ಡನ್ ಬಳಿ‌ ಎಸೆದಿದ್ದಾರೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಬರ್ಕೆ ಠಾಣಾ ಇನ್ಸ್‌ಪೆಕ್ಟರ್ ಸಿಬ್ಬಂದಿ ಆಗಮಿಸಿ ತನಿಖೆ ‌ನಡೆಸುತ್ತಿದ್ದಾರೆ.ಈತನ ಮೇಲೆ ಪಾಂಡೇಶ್ವರ ಪೋಲಿಸ್ ಠಾಣೆಯಲ್ಲಿ‌ ರೌಡಿ ಶೀಟ್ ತೆರೆಯಲಾಗಿತ್ತು.