ಕಾನ್ಪುರ: ಇಲ್ಲಿನ ಎಂಟು ಮಂದಿ ಪೊಲೀಸರನ್ನು ಹತ್ಯೆಗೈದಿದ್ದ ರೌಡಿಶೀಟರ್ ವಿಕಾಸ್ ದುಬೆ ಇಂದು ಬೆಳಿಗ್ಗೆ ಕಾನ್ಪುರದ ಹೊರವಲಯದಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.
ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿ ದೇವಾಲಯವೊಂದರಲ್ಲಿ ನಿನ್ನೆ ಬಂಧಿಸಲಾಗಿತ್ತು. ಇಂದು ಬೆಳಿಗ್ಗೆ ಆತನನ್ನು ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ಕಾರು ಪಲ್ಟಿಯಾಗಿದ್ದು, ಈ ವೇಳೆ ವಿಕಾಸ್ ದುಬೆ ಪೊಲೀಸರ ಗನ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ದುಬೆ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.