ಬನ್ನಂಜೆ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಅ.31 ಸೋಮವಾರದಂದು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ ರುದ್ರ ಯಾಗ ನಡೆಯಲಿದೆ.
ಅಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11ಗಂಟೆಗೆ ಪೂರ್ಣಾಹುತಿ ಬಳಿಕ ಮಹಾಪೂಜೆ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.