ಬನ್ನಂಜೆ: ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ದೇವರ ಸನ್ನಿಧಿಯಲ್ಲಿ ಸೋಮವಾರ ದೇವಳದ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ-ರುದ್ರಯಾಗ ನಡೆಯಿತು.
ಬೆಳ್ಳಿಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11 ಗಂಟೆಗೆ ಪೂರ್ಣಾಹುತಿ, ಮಹಾಪೂಜೆ, ಶಿವ ಸನ್ನಿಧಿಯಲ್ಲಿ ನೂರಾರು ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾಮ್ ಬನ್ನಂಜೆ, ಅರ್ಚಕ ವಾಸುದೇವ ಉಪಧ್ಯಾಯ, ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಟಿ ಜಿ ಹೆಗ್ಡೆ, ಸುರೇಶ ಸೇರಿಗಾರ, ವಿಠಲ್ ಶೆಟ್ಟಿ, ದಯಾನಂದ ಕಲ್ಮಾಡಿ, ಭುಜಂಗ ಶೆಟ್ಟಿ, ಸುಧಾಕರ್ ಮಲ್ಯ, ಅನುಪಮಾ ಆನಂದ ಸುವರ್ಣ, ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.
ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.