ದೈವ ನರ್ತಕರಿಗೆ ತಿಂಗಳಿಗೆ ರೂ. 2 ಸಾವಿರ ಮಾಸಶನ: ಸಚಿವ ಸುನಿಲ್ ಕುಮಾರ್ ಘೋಷಣೆ

ಉಡುಪಿ/ಮಂಗಳೂರು: ಕರಾವಳಿ ಭಾಗದಲ್ಲಿ ದೈವ ನರ್ತಕರಿಗೆ ದೀಪಾವಳಿ ಶುಭಸುದ್ದಿ ಬಂದಿದೆ. ದೈವ ನರ್ತಕರಿಗೆ ಮಾಸಾಶನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.