ಹಾಡು ನಿಲ್ಲಿಸಿದ ಗಾನಕೋಗಿಲೆ ಎಸ್ ಜಾನಕಿ: ಕಳಚಿದ ಪರಂಪರೆಯ ಸಂಗೀತ ಕೊಂಡಿ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ.

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.

ಬಳಿಕ ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

1957ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ. ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಜಾನಕಿ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದು ಎಂದು ಹರಿದು ಬರಲು ಪ್ರಾರಂಭವಾದವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯವನ್ನು ಹರಿಸಿದರು.

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೇ’, ‘ಯುಗ ಯುಗಾದಿ ಕಳೆದರೂ’, ‘ಹೇಳೇ ಗೆಳತಿ ಬಾನಲ್ಲು ನೀನೆ ಭುವಿಯಲ್ಲು ನೀನೆ’, ‘ಬಿಸಿಲಾದರೇನು ಮಳೆಯಾದರೇನು’ ಸೋಲೆ ಇಲ್ಲ ಅಂತಹ ಅಸಂಖ್ಯಾತ ಸುಮಧುರ ಕನ್ನಡ ಗೀತೆಗಳಿಗೆ ಅವರು ದನಿಯಾಗಿದ್ದಾರೆ.

ಎಸ್. ಜಾನಕಿ ಅವರಿಗೆ ಹಲವು ರಾಷ್ಟ್ರಪ್ರಶಸ್ತಿಗಳು, ವಿವಿಧ ರಾಜ್ಯಗಳ ಪ್ರಶಸ್ತಿಯನ್ನು ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಇತ್ತು ಸನ್ಮಾನಿಸಿದೆ. ಇನ್ನು ಇತ್ತೀಚಿನ ವರ್ಷದಲ್ಲಿ ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ, ಪದ್ಮ ಪ್ರಶಸ್ತಿಗಳಲ್ಲಿ ದಕ್ಷಿಣ ಭಾರತೀಯರ ಬಗ್ಗೆ ಅಸಡ್ಡೆ ಇರುವುದನ್ನು ವಿರೋಧಿಸಿ, ಎಸ್. ಜಾನಕಿಯವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದರು.