ಮಂಗಳೂರು: ಮಹಾನಗರ ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆ. 9ರಂದು ಬೆಳಗ್ಗೆ 10.30ಕ್ಕೆ ಶ್ರೀ ರಾಧಾಕೃಷ್ಣ ಹಾಲ್ (ಬಾಳಂ ಭಟ್ ಹಾಲ್)ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಒಡಿಯೂರು ಮಠದ ಶ್ರೀಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳು, ಕಾರ್ಕಳ ಇದರ ಪ್ರವರ್ತಕ ಡಾ| ಸುಧಾಕರ ಶೆಟ್ಟಿ, ಶಾಸಕ ಡಾ| ವೈ. ಭರತ್ ಶೆಟ್ಟಿ, ರಾಜ್ಯ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.















