ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ: ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ ವತಿಯಿಂದ ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಹತ್ತಿರದ ಶ್ರೀ ರಾಧಾಕೃಷ್ಣ ಹಾಲ್ (ಬಾಳಂಭಟ್ ಹಾಲ್)ನಲ್ಲಿ ನಡೆಯಲಿದೆ.

ಬೆಳಗ್ಗೆ 11ಕ್ಕೆ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ.ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.ನಿಟ್ಟೆ ಎನ್.ಎಂ.ಎ.ಎಂ. ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ವಿಭಾಗ ಮುಖ್ಯಸ್ಥರಾದ ಡಾ.ಸುಷ್ಮಾ ಪಿ.ಎಸ್. ಶುಭಾಶಂಸನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೆನರಾ ಜ್ಯುವೆಲ್ಲರ್ಸ್ ಮಂಗಳೂರಿನ ಧನಂಜಯ ಪಾಲ್ಕೆ, ವಿಧಾನ ಪರಿಷತ್‌ ಮಾಜಿ ಸದಸ್ಯ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್‌, ಎಸ್.ಎಸ್.ಕೆ. ವಿಶ್ವಕರ್ಮ ಸೇವಾ ಟ್ರಸ್ಟ್, ಮಂಡ್ಯ ಜಿಲ್ಲೆಯ ಸ್ಥಾಪಕರಾದ ಎಂ.ಬಿ.ರಮೇಶ ಆಚಾರ್ಯ ಭಾಗವಹಿಸಲಿದ್ದಾರೆ.

ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾಣ ವ್ಯವಸ್ಥಾಪಕರಾದ ಯಜೇಶ್ವರ, ಆಡಳಿತ ಮಂಡಳಿಯ ನಿರ್ದೇಶಕರಾದ ಕೆ.ಯಜೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.