ನೂರೊಂದು ನೆನಪು ಎದೆಯಾಳದಲ್ಲಿ ಬಿಟ್ಟು ಹೋದ್ರು ಎಸ್ ಪಿ ಬಾಲಸುಬ್ರಹ್ಮಣ್ಯ

ಚೆನ್ನೈ: ನೂರೊಂದು ನೆನಪುಗಳನ್ನು ಅಭಿಮಾನಿಗಳ ಎದೆಯಾಳದಲ್ಲಿ ಅಮರವಾಗಿಸಿ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯ ಅವರು ನಿದ್ದೆ ಜಾರಿದ್ದಾರೆ.

ಗಾನ ಗಂಧರ್ವ ಎಂದೇ ಖ್ಯಾತರಾದ ಎಸ್ ಪಿ ಬಾಲಸುಬ್ರಮಣ್ಯಂ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು.
ಎಸ್ ಪಿಬಿ ಕಳೆದ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

74 ವರ್ಷದ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಪಿಬಿ ಕೊರೊನಾದಿಂದ ಗುಣಮುಖರಾಗಿ ಆರೋಗ್ಯವಾಗಿದ್ದರು. ಬಳಿಕ ಅವರ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ ಕಂಡಿತ್ತು. ಆದರೆ ಅವರ ಆರೋಗ್ಯ ಮತ್ತೆ ಏಕಾಏಕಿಯಾಗಿ ಬಿಗಡಾಯಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಎಸ್ ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆ ಸೇರಿದಂತೆ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.