ಸಾಗರ: ಯಡೇಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸೆ.2ರಂದು ನಡೆದಿದೆ.
ನೇಣಿಗೆ ಶರಣಾದ ಮಹಿಳೆ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮದ ವಾಸಿ ರಂಜಿತಾ (28). ಮನೆಯಲ್ಲಿ ಯಾರೂ ಇಲ್ಲದ ಸಮಯ ರಂಜಿತಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವೈಯಕ್ತಿಕ ವಿಚಾರಕ್ಕೆ ಮನನೊಂದು ಈ ನಿರ್ಧಾರ ಮಾಡಿಕೊಂಡಿದ್ದಾಳೆ ಎಂದು ರಂಜಿತಾಳ ತಾಯಿ ಪೊಲೀಸ್ ಠಾಣೆಗೆ ದೂರ ನೀಡಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.












