ಎಲ್ಲರ ಗಮನ ಸೆಳೆಯುತ್ತಿದೆ ‘ಸೈಯಾರಾ’ ಸಿನಿಮಾ: ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 250 ಕೋಟಿ ರೂ. ಕಲೆಕ್ಷನ್.!

`ಸೈಯಾರಾ’ ಸಿನಿಮಾ ಜು.18ರಂದು ತೆರೆಕಂಡು, ಎಲ್ಲೆಡೆ ಯಶಸ್ವಿಯಾಗಿ ಪ್ರದರ್ಶನಗೊಂಡಿದೆ. ಮೋಹಿತ್ ಸೂರಿ ನಿರ್ದೇಶನದ ಈ ಸಿನೆಮಾ, ಬಿಡುಗಡೆಯಾಗಿ ಕೇವಲ ಎರಡೇ ವಾರದಲ್ಲಿ ತನ್ನ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 250 ಕೋಟಿ ರೂ. ಬಾಚಿಕೊಂಡಿದೆ.

`ಸೈಯಾರಾ’ ಸಿನಿಮಾ ಮೊದಲ ದಿನವೇ 21.5 ಕೋಟಿ ರೂ. ಗಳಿಸಿತು. ದಿನಗಳೆದಂತೆ ಸಿನಿಮಾ ಕ್ರೇಜ್ ಹೆಚ್ಚುತ್ತಲೇ ಇದೆ. ಸಾಮಾನ್ಯವಾಗಿ ವಾರದ ದಿನಗಳಲ್ಲಿ ಕಡಿಮೆ ಕಲೆಕ್ಷನ್ ಆದರೂ ಕೂಡ ಈವರೆಗೂ ಎರಡಂಕಿಗಿಂತ ಕೆಳಗಿಳಿದಿಲ್ಲ. ಆದರೆ ವೀಕೆಂಡ್‌ನಲ್ಲಿ ಮಾತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಸೈಯಾರಾ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿರುವ ಅಹಾನ್ ಪಾಂಡೆ ಹಾಗೂ ಅನೀತ್ ಪಡ್ಡಾ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚೊಚ್ಚಲ ಸಿನಿಮಾದಿಂದಲೇ ಭರ್ಜರಿ ಎಂಟ್ರಿಕೊಟ್ಟಿದ್ದು, ಎಲ್ಲರ ಗಮನ ಸೆಳೆದಿದ್ದಾರೆ.

ಬ್ಲಾಕ್‌ಬಸ್ಟರ್ ಹಿಟ್:
ಸೈಯಾರಾ ಸಿನಿಮಾ ದಾಖಲೆಯ ಗಳಿಕೆ ಕಂಡಿದ್ದು, ಈ ಮೂಲಕ ಬ್ಲಾಕ್‌ಬಸ್ಟರ್ ಹಿಟ್ ಆಗಿದ್ದ ದೃಶ್ಯಂ 2, ದಿ ಕೇರಳ ಫೈಲ್ಸ್, ಕ್ರಿಶ್ 3 ಸಿನಿಮಾಗಳನ್ನು ಹಿಂದಿಕ್ಕಿದೆ. ಸೈಯಾರಾ ಸಿನಿಮಾ ಉತ್ತಮ ಕಥಾಹಂದರವನ್ನು ಹೊಂದಿದ್ದು, ಪ್ರೇಕ್ಷಕರನ್ನು ಭಾವನಾತ್ಮಕವಾಗಿ ತನ್ನೆಡೆಗೆ ಸೆಳೆಯುತ್ತದೆ. ಜೊತೆಗೆ ಸಿನಿಮಾದಲ್ಲಿರುವ ಹಾಡುಗಳು ಸಂಗೀತ ಪ್ರಿಯರನ್ನು ಹಿಡಿದಿಟ್ಟುಕೊಳ್ಳುತ್ತದೆ.