ಉಡುಪಿ: ಸಾಲಿಗ್ರಾಮದ ನರ್ತಕೀ ಬಾರ್ ಸಮೀಪ ಕಿಯಾ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಟೈರ್ ಸ್ಫೋಟಗೊಂಡ ರಭಸಕ್ಕೆ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಅಪ್ಪಳಿಸಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಟನೆಯಿಂದ ಕಾರಿಗೆ ಹಾನಿಯಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.















