ಉಡುಪಿ : 2023- 24ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಎಪ್ರಿಲ್ ಒಂದರಿಂದ ಅವಕಾಶ ಕಲ್ಪಿಸಲಾಗಿದ್ದು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ಯಮೆದಾರಿಗೆ ವ್ಯಾಪಾರ ಆನ್ಲೈನ್ ತಂತ್ರಾಂಶದ ಮೂಲಕ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯಮ ಪರವಾನಿಗೆ ಪಡೆಯದ ಇರುವವರು ದಾಖಲೆ ಸಹಿತ ಅರ್ಜಿ ಸಲ್ಲಿಸಬಹುದು ಹಾಗೂ ಪರವಾನಿಗೆ ನವೀಕರಿಸದೆ ಇರುವವರು ಕೂಡ ದಾಖಲೆ ಸಹಿತ ಬಾಕಿ ದಂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿ ಪರವಾನಿಗೆಯನ್ನು ಪಡೆದುಕೊಳ್ಳಬಹುದು
ಉದ್ದಿಮೆ ಪರವಾನಿಗೆ ಪಡೆದು ಉದ್ದಿಮೆ ನಡೆಸಿದೆ ಇರುವವರು ಪಟ್ಟಣ ಪಂಚಾಯತ್ ಕಚೇರಿಗೆ ಲಿಖಿತ ಮಾಹಿತಿಯನ್ನು ನೀಡಿ ಪರವಾನಿಗೆ ರದ್ದು ಪಡಿಸಲು ಕ್ರಮ ವಹಿಸಬೇಕು ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.












