ಅಂಚೆ ವಿಭಾಗದ ವತಿಯಿಂದ ಸೆ. 15 ರಂದು ಸುಕನ್ಯಾ ಸಮೃದ್ಧಿ ಮಹೋತ್ಸವ

ಉಡುಪಿ: ಉಡುಪಿ ಅಂಚೆ ವಿಭಾಗದ ವತಿಯಿಂದ ಸೆಪ್ಟಂಬರ್ 15 ರಂದು ಸಂಜೆ 4 ಗಂಟೆಗೆ ನಗರದ ಮಿಷನ್ ಆಸ್ಪತ್ರೆಯ ಮಾರ್ಗದಲ್ಲಿರುವ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಸುಕನ್ಯಾ ಸಮೃದ್ಧಿ ಮಹೋತ್ಸವವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಬಡಗಬೆಟ್ಟು ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಜನ ಸುರಕ್ಷಾ ಯೋಜನೆ, ಉಳಿತಾಯ ಯೋಜನೆ, ಜೀವವಿಮೆ, ಗ್ರಾಮೀಣ ಜೀವ
ವಿಮೆ, ಐ.ಪಿ.ಪಿ.ಬಿ, ಸಿ.ಎಸ್.ಸಿ ಮುಂತಾದ ಯೋಜನೆಗಳ ಮಾಹಿತಿ ಶಿಬಿರ, ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಂಚೆ ಚೀಟಿ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.