ಉಡುಪಿ, ಮೇ 28: ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದೆ. ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 50,000 ರೂ. ಗಳನ್ನು ಸರ್ಕಾರದಿಂದ ನೀಡಲಾಗುವುದು. ಈ ಸಂಬಂಧ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.