ಹಿರಿಯಡ್ಕ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಹಿರಿಯಡ್ಕ ವಲಯ ಮತ್ತು ಸಾಮೂಹಿಕ ಸತ್ಯನಾರಾಯಣ ಸಮಿತಿ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯಡ್ಕ ದೇವಾಡಿಗ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಮಹಾಲಿಂಗೇಶ್ವರ ದೇವಸ್ಥಾನ ಕೊಂಡಾಡಿಯ ಪ್ರಧಾನ ಪುತೋಹಿತ ಹರೀಶ್ ಭಟ್ ಇವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯ್ಕ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯೋಜನೆಯ ಜಿಲ್ಲಾ ಹಿರಿಯ ನಿರ್ದೇಶಕ ಶಿವರಾಯ ಪ್ರಭು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ಮುನಿಯಾಲು ಆಯುರ್ವೇದಿಕ್ ಕಾಲೇಜಿನ ಉಪ ಪ್ರಾಂಶುಪಾಲ ಹೆರ್ಗ ಹರಿದಾಸ್ ಭಟ್ ಧಾರ್ಮಿಕ ಪ್ರವಚನ ನೀಡಿದರು.

ವೇದಿಕೆಯಲ್ಲಿ ಜನಜಾಗ್ರತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿಯ ಸದಸ್ಯ ಸತ್ಯಾನಂದ ನಾಯಕ್ ಅತ್ರಾಡಿ, ಹಿರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಮುಂಡುಜೆ, ಕೊಡಿಬೆಟ್ಟು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾ ಶೆಟ್ಟಿ, ಅರ್ಚಕ ಹರೀಶ್ ಭಟ್, ತಾಲೂಕು ಯೋಜನಾಧಿಕಾರಿ ರಾಮ ಎಮ್, ದೇವಾಡಿಗರ ಸಭಾ ಭವನ ಅಧ್ಯಕ್ಷ ಸದಾನಂದ ಸೇರಿಗಾರ್ ಮುಂತಾದವರು ಉಪಸ್ಥಿತರಿದ್ದರು.

ಯೋಜನೆಯ ವಲಯ ಮೇಲ್ವಿಚಾರಕ ಸಂತೋಷ್ ಸ್ವಾಗತಿಸಿದರು. ಅಧ್ಯಕ್ಷ ರಾಘವೇಂದ್ರ ನಾಯ್ಕ್ ವಂದಿಸಿದರು.

ಶ್ರೀಮತಿ ಅನುಸೂಯ ಮತ್ತು ರಾಘವೇಂದ್ರ ಆಚಾರ್ ರವರು ನಿರೂಪಿಸಿದರು.

ಪಂಚನಬೆಟ್ಟು ರಾಮ ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಿತು. ಬಳಿಕ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.