ಕರ್ನಾಟಕ ಶಾಲಾ ಶಿಕ್ಷಣ ಮಂಡಳಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸಾನಿಧ್ಯ ಎಸ್. ನಾಯ್ಕ್ ಸಾಧನೆ.

ಕುಂದಾಪುರ: ಕರ್ನಾಟಕ ಶಾಲಾ ಶಿಕ್ಷಣ ಮಂಡಳಿ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-26 ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಕುಂದಾಪುರದ ಗುರುಕುಲ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್ ನಾಯ್ಕ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾಳೆ. ಕುಂದಾಪುರದ ಖಾರ್ವಿಕೇರಿ ನಿವಾಸಿ ಶ್ರೀಮತಿ ಶ್ಯಾಮಲಾ ಮತ್ತು ಸಂತೋಷ ನಾಯ್ಕ್ ಇವರ ಪುತ್ರಿಯಾಗಿರುವ ಇವರು, ಪ್ರಸ್ತುತ ಚಿತ್ರಕಲಾ ಶಿಕ್ಷಕರಾದ ಮಲ್ಲಪ್ಪ ಇವರ ಮಾರ್ಗದರ್ಶನದಲ್ಲಿ ಚಿತ್ರಕಲೆಯನ್ನು ಅಭ್ಯಾಸ ಮಾಡುತ್ತಿದ್ದಾರೆ.