ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿ ನಯನ ಗಣೇಶ್ ನೇತೃತ್ವದ ಆಸರೆಯ ಬೆಳಕು ಸಂಸ್ಥೆಯ ವತಿಯಿಂದ ಇಂದು ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್, ಮಾಸ್ಕ್, ಗ್ಲಾ ಓಸ್ ಫೇಸ್ ಶೀಲ್ಡ್, ಸೀರೆ ವಿತರಿಸಿ ಗೌರವ ಅರ್ಪಣೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್, ರಾಜ್ಯ ಫಲಾನುಭವಿಗಳ ಪ್ರಕೋಷ್ಠ ದ ರಾಜ್ಯ ಸಮಿತಿ ಸದಸ್ಯರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ, ಸತ್ಯಾನಂದ ನಾಯಕ್, ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯನ್, ಕಾಪು ಕ್ಷೇತ್ರ ಕಾರ್ಯದರ್ಶಿ ರಾಜೇಶ್ ಸುವರ್ಣ, ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ಸಾಲಿಯಾನ್, ಕಾಪು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಪಿತ್ರೋಡಿ, ಗಣೇಶ್, ಲಕ್ಷ್ಮಣ್ ಉಪಸ್ಥಿತರಿದ್ದರು.