ಕಾರ್ಕಳ: ಸಂಜೀವಿನಿ ರಾಷ್ಟ್ರಮಟ್ಟದ ಕರಕುಶಲ ವಸ್ತು ಪ್ರದರ್ಶನ-ಮಾರಾಟ ಮಳಿಗೆ ಉದ್ಘಾಟನೆ

ಕಾರ್ಕಳ :ಆಚಾರ-ವಿಚಾರ ಪದ್ಧತಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಒಂದು ವೇದಿಕೆಯಡಿ ಎಲ್ಲಾ ಪ್ರದೇಶಗಳ ವಸ್ತುಗಳು ಮತ್ತು ಉತ್ಪನ್ನಗಳನ್ನು ನೋಡುವ ಅವಕಾಶ ದೊರಕಿದೆ. ವಿವಿಧ ಜಿಲ್ಲೆಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದಿಂದ ಸಬಲೀಕರಣದ ಸಫಲತೆ ಫಲ ಕಂಡು ಬರುತ್ತಿದೆ. ಇಲ್ಲಿ ಒಂದು ರೀತಿಯಲ್ಲಿ ಭಾರತ ದರ್ಶನ ಆಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಭಾರತ ಸರಕಾರ-ಗಾಂಧೀ ಸಿಲ್ಕ್ ಬಜಾರ್, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಬೆಂಗಳೂರು, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ರಾಷ್ಟ್ರಮಟ್ಟದ ಕರಕುಶಲ ವಸ್ತುಪ್ರದರ್ಶನ ಮತ್ತು ರಾಜ್ಯದ ಮಟ್ಟದ ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಶುಭಹಾರೈಸಿದರು.

ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ರೂಪಾ ಡಿ. ಮದ್ಗಿಲ್ ಮಾತನಾಡಿ, ಕಾರ್ಕಳದಲ್ಲಿ ರಾಷ್ಟ್ರ ಮಟ್ಟದ ಕರಕುಶಲ ಮೇಳ ನಡೆಯುತ್ತಿರುವುದು ಸಂತಸದ ಸಂಗತಿ. ಸರಕಾರ ಮತ್ತು ಸಚಿವರ ನೆರವಿನಿಂದ ಈ ಕಾರ್ಯಕ್ರಮ ಸಾಧ್ಯವಾಗಿದೆ ಎಂದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಐಎಎಸ್ ಅಧಿಕಾರಿ ಯತೀಶ್, ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ವಿ. ರಾಜು, ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್, ಕರಕುಶಲ ಹ್ಯಾಂಡಿಕ್ರಾಫ್ಟ್ ಅಸಿಸ್ಟೆಂಟ್ ಡೈರೆಕ್ಟರ್ ಮೈಕಲ್, ಸಂಜೀವಿನಿ ಒಕ್ಕೂಟದ ತಾಲೂಕು ಅಧ್ಯಕ್ಷೆ, ರೇವತಿ ಉಪಸ್ಥಿತರಿದ್ದರು.

ಜಿ.ಪಂ ಸಿಇಒ ಪ್ರಸನ್ನ ಪ್ರಸ್ತಾವಿಸಿದರು. ಪ್ರಮೀಳಾ ನಾಗೇಶ್ ಸ್ವಾಗತಿಸಿ, ಅಂಕಿತಾ ವಂದಿಸಿ, ಗಣೇಶ್ ಜಾಲ್ಸೂರು ನಿರೂಪಿಸಿದರು. ಕಾರ್ಕಳ ಪ್ರವಾಸೋದ್ಯಮ ಕುರಿತ ಕಿರು ಹೊತ್ತಿಗೆ ಬಿಡುಗಡೆಗೊಂಡಿತು.