ಸಂಕ್ರಾಂತಿಗೆ ರಾಜ್ಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ: ಯತ್ನಾಳ್ ಭವಿಷ್ಯ

ವಿಜಯಪುರ: ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ ಆಗಲ್ಲ. ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕರ ಸಂಕ್ರಾಂತಿಗೆ ಸೂರ್ಯ ತನ್ನ ಪಥವನ್ನು ಬದಲಾಯಿಸಿ ಉತ್ತರಾಯಣ ಆರಂಭವಾಗಲಿರುವುದರಿಂದ ಉತ್ತರ ಕರ್ನಾಟಕಕ್ಕೆ ಒಳಿತಾಗಲಿದೆ ಎಂದರು.

ಯಾರಾರ ಹಣೆಬರಹ ಏನೇನಿದೆಯೋ ಗೊತ್ತಿಲ್ಲ. ವಿಜಯಪುರಕ್ಕೆ ಇಷ್ಟು ವರ್ಷಗಳ ಕಾಲ ಆಗಿರುವ ಅನ್ಯಾಯ ಸರಿಯಾಗಲಿದೆ ಎಂದು ಹೇಳಿದರು.

ವಿಜಯಪುರದಲ್ಲಿ ನೂತನವಾಗಿ ಆರಂಭವಾಗಿರುವ ಐಆರ್‌ಬಿ ಬೆಟಾಲಿಯನ್‌ ಉದ್ಘಾಟನೆ ಸಂಬಂಧ ಜನವರಿ 16ಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಜಯಪುರಕ್ಕೆ ಬರಲಿದ್ದಾರೆ. ಅವರು ಬರುವ ಮೊದಲೇ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿದರು.