ಸಂತೆಕಟ್ಟೆ ಮೇಲ್ಸೇತುವೆ ಕಾಮಗಾರಿಗೆ ಸಿದ್ದತೆ: ವರ್ಷದೊಳಗೆ ಪೂರ್ಣಗೊಳ್ಳುವ ಸಾಧ್ಯತೆ

ಉಡುಪಿ: ಇಲ್ಲಿನ ರಾ.ಹೆ 66 ರಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಂತೆಕಟ್ಟೆ ಮತ್ತು ಅಂಬಲಪಾಡಿ ಮೇಲ್ಸೇತುವೆ ನಿರ್ಮಾಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅನುಮೋದನೆ ನೀಡಿದ್ದು, ಇದೀಗ ಈ ಭಾಗದಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ.

ಕಾಮಗಾರಿಯ ವೆಚ್ಚ 27.4 ಕೋ ರೂ ಆಗಲಿದ್ದು ಅದಾಗಲೇ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಟ್ರಿನಿಟಿ ಕನ್ಸ್ಟ್ರಕ್ಷನ್ ಮೇಲ್ಸೇತುವೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದೆ. ಸೋಮವಾರದಿಂದಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿದ್ದು, ಸರ್ವಿಸ್ ರತೆಗಳ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಜ.12 ರಂದು ಭೂಮಿ ಪೂಜೆ ನಡೆಯಲಿದ್ದು ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.