ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣಮಠ ಆಶ್ರಯದಲ್ಲಿ ಸಪ್ತೋತ್ಸವ ಅಂಗವಾಗಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪರ್ಯಾಯ ಅದಮಾರು ಈಶಪ್ರಿಯತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಕೊರಂಗ್ರಪಾಡಿ ವಿದ್ವಾನ್ ಸೀತಾರಾಮ ಆಚಾರ್ಯ, ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮ್ಯಾನೇಜರ್ ರಾಘವೇಂದ್ರ ನಾಯಕ್ ಅವರನ್ನು ಸನ್ಮಾನಿಸಲಾಯಿತು.