ಮಂಗಳೂರು: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ ಮಂಗಳೂರಿನ ಮುಳಿಹಿತ್ಲುವಿನಲ್ಲಿ ಶನಿವಾರ ನಡೆದ ಸಿಗ್ಮಾ ಪ್ರೋಹೆಲ್ತ್ ಇನ್ಶೂರೆನ್ಸ್ ಕಾರ್ಡ್ ವಿತರಣೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ರಕ್ತದಾನ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ರಕ್ತದ ಅಪತ್ಭಾಂದವ ಸತೀಶ್ ಸಾಲ್ಯಾನ್ ಮಣಿಪಾಲ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್, ಉಡುಪಿ – ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೊಟ್ಯಾನ್, ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಇದ್ದರು.