ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಈಶ ಫೌಂಡೇಶನ್ಗಳ ಸಂಯುಕ್ತ ಆಶ್ರಯದಲ್ಲಿ ಮಣ್ಣು ಉಳಿಸಿ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕ ಮತ್ತುನಿಟ್ಟೆ ಯುನಿವರ್ಸಿಟಿ ಪ್ರೊಫೆಸರ್ ಸಭ್ಯತ್ ಶೆಟ್ಟಿ, ಸದ್ಗುರು ಜಗ್ಗಿ ವಾಸುದೇವ್ ರವರು ಸಂಘಟಿಸಿ ನಡೆಸುತ್ತಿರುವ ವಿಶ್ವಮಟ್ಟದ ಮಣ್ಣು ಉಳಿಸಿ ಅಭಿಯಾನದ ಹಿನ್ನೆಲೆ, ಮಹತ್ವವನ್ನು ವಿವರಿಸಿದರು.
ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕರಾದ ಯಶ್ ಶೆಟ್ಟಿ, ಮಂಗಳಾ ಚಂದ್ರಕಾಂತ್, ಪದ್ಮಜಾ, ರಾಜೇಶ್ ಪ್ರಭು, ಪ್ರೀತೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಯಾನದ ಬಗ್ಗೆ ಮಾಹಿತಿ ನೀಡಿ, ನೃತ್ಯ, ಆಶುಭಾಷಣ, ರಸಪ್ರಶ್ನೆಗಳ ಮೂಲಕ ಮಣ್ಣು ಉಳಿಸಿ ಅಭಿಯಾನದ ಅರಿವು ಮೂಡಿಸಿದರು.
ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ ಕೊಡವೂರು, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಜ್ಯೋತಿ ಪದ್ಮನಾಭ ಬಂಡಿ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಾಧಿಕಾರಿ ರವಿ ಜಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.