ಸವಿತಾ ಸಮಾಜ ಬಾಂಧವರು ಸಮಾಜದಲ್ಲಿ ಮುಂದೆ ಬರಬೇಕು: ಕೆ. ಜಯಪ್ರಕಾಶ್ ಹೆಗ್ಡೆ

ಉಡುಪಿ: ಸವಿತಾ ಸಮಾಜದವರು ನಾವು ಎಲ್ಲರೂ ಸಮಾನರು ಎಂಬ ಭಾವನೆಯನ್ನು ಬೆಳೆಸಿ ಕೀಳರಿಮೆಯನ್ನು ಹೋಗಲಾಡಿಸಿ ಸಮಾಜದ ಮುಖ್ಯಧಾರೆಯಲ್ಲಿ ಒಂದಾಗಿ ಮುಂದೆ ಬರಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು, ಮುಂದಿನ ಪೀಳಿಗೆಗೆ ಸಮಾಜದಲ್ಲಿ ಬದಲಾವಣೆ ತರಲು ನಿಮ್ಮಿಂದ ಸಾಧ್ಯವಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸವಿತಾ ಸಮಾಜ ಸಮುದಾಯದ ಸಭಾಂಗಣ ಅಂಬಲಪಾಡಿಯಲ್ಲಿ ಹಮ್ಮಿಕೊಳ್ಳಲಾದ ಸವಿತಾ ಮಹರ್ಷಿ ಜಯಂತಿಯನ್ನು ಉದ್ಘಾಟಿಸಿ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ತಾಲೂಕು ಸವಿತಾ ಸಮಾಜದ ಗೌರವಾಧ್ಯಕ್ಷ ಗೋವಿಂದ ಭಂಡಾರಿ, ಕಾರ್ಕಳ ತಾಲೂಕು ಘಟಕದ ನಾಗೇಶ ಭಂಡಾರಿ, ಕಾಪು ತಾಲೂಕಿನ ಅಧ್ಯಕ್ಷ ವಿನಯ ಭಂಡಾರಿ,ಜೊತೆ ಕಾರ್ಯದರ್ಶಿ ಸದಾಶಿವ ಭಂಡಾರಿ,ಹೆಬ್ರಿ ಘಟಕದ ಸುರೇಶ್ ಭಂಡಾರಿ, ಬ್ರಹ್ಮಾವರ ತಾಲೂಕು ಘಟಕದ ರಾಜು ಸಿ ಭಂಡಾರಿ ಉಪಸ್ಥಿತರಿದ್ದರು.