ಉಡುಪಿ : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(ನಿ)ದಿಂದ ಸವಿತಾ ಸಮಾಜಕ್ಕೆ ಸೇರಿದ (ಪರಿಯಾಳ, ಅಂಬಟ್ಟನ್, ಬಜಂತ್ರಿ, ಭಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ನಾಡಿಗ್, ಕ್ಷೌರಿಕ್, ಕ್ಷೌರಿಕ) ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರಾದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಉಚಿತವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ www.dbcdc.karnataka.gov.in ನಲ್ಲಿ ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಅಥವಾ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಉಡುಪಿ ಜಿಲ್ಲಾ ಕಛೇರಿಗೆ ಆಗಸ್ಟ್ 3 ರ ಒಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ನಿಗಮದ ದೂರವಾಣಿ 0820-2574882 ಅಥವಾ ವೆಬ್ಸೈಟ್ನಲ್ಲಿ ಸಂಪರ್ಕಿಸುವoತೆ ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.