ಉಡುಪಿ: ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ತರಬೇತಿ

ಉಡುಪಿ : 2019-20 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.

 ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಜೂನ್ 4 ರೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು.

 ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ಅನ್ನು ಸಂಪರ್ಕಿಸುವಂತೆ ಉಡುಪಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.