ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ಎಸ್ಸಿಒ) ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ: 600
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವೇತನ: ಮಾಸಿಕ ವೇತನಕ್ಕೆ ಸಂಬಂಧಿಸಿದ ಮಾಹಿತಿಗೆ ಈ ಕೆಳಗೆ ನೀಡಿರುವ ಎಸ್ಬಿಐ ವೆಬ್ಸೈಟ್ನಿಂದ ಮಾಹಿತಿ ಪಡೆಯಬಹುದು.
ವಯಸ್ಸು: 21 ರಿಂದ 40 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ).
ವಯೋಮಿತಿ ಸಡಿಲಿಕೆ: ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಕೆಲವು ಹುದ್ದೆಗಳಿಗೆ ಮಾತ್ರ) ಹಾಗೂ ಅಭ್ಯರ್ಥಿಗಳ ಸೇವಾ ಅನುಭವವನ್ನು ಪರಿಗಣಿಸಿ ಸಂದರ್ಶನಕ್ಕೆ ಕರೆಯಲಾಗುವುದು. ನೇಮಕಾತಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹750, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.
ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ: 18–10–2021
ಹುದ್ದೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಪ್ರತ್ಯೇಕವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ನೋಡಿ:https://www.sbi.co.in orwww.sbi.co.in/careers